ಬೆಂಗಳೂರು: ದೆಹಲಿ ಗಡಿಭಾಗದಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಕೈಗೊಂಡಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ ಆರೋಪದಡಿ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದನ್ನು ರದ್ದುಪಡಿಸಬೇಕೆಂದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ತುಮಕೂರಿನ ವಕೀಲರೊಬ್ಬರು ಖಾಸಗಿ ದೂರು ದಾಖಲಿಸಿದ್ದು, ಕ್ಯಾತಸಂದ್ರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದನ್ನು ರದ್ದುಮಾಡಬೇಕೆಂದು ಕಂಗನಾ ರಣಾವತ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಪೀಠದಲ್ಲಿ ವಿಚಾರಣೆ ನಡೆದು ಪೊಲೀಸರಿಗೆ ನೋಟಿಸ್ ಜಾರಿ ಮಾಡಲಾಗಿದೆ.