ಬೆಂಗಳೂರು: ಒಸಿಐ ಮಾನ್ಯತೆ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಅವರಿಗೆ ಹೈಕೋರ್ಟ್ ಮತ್ತೆ ರಿಲೀಫ್ ನೀಡಿದೆ.
ಜೂನ್ 20 ರವರೆಗೆ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಲಾಗಿದೆ. ಅವರಿಗೆ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಆರೋಪ, ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ನಟ ಚೇತನ್ ಅವರಿಗೆ ಕೇಂದ್ರ ಸರ್ಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಒಸಿಐ ಕಾರ್ಡ್ ಅನ್ನು ಕೇಂದ್ರ ಸರ್ಕಾರ ರದ್ದುಪಡಿಸಿತ್ತು.
ಇದನ್ನು ಹೈಕೋರ್ಟ್ ನಲ್ಲಿ ಚೇತನ್ ಪ್ರಶ್ನಿಸಿದ್ದರು. ಏ. 21 ರಂದು ಷರತ್ತುಬದ್ದ ಬದ್ಧ ರಿಲೀಫ್ ನೀಡಲಾಗಿತ್ತು. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ರೀಟ್ ಮಾಡುವಂತಿಲ್ಲ. ಬಾಕಿ ಇರುವ ಕೇಸುಗಳ ಬಗ್ಗೆ ಟ್ವೀಟ್ ಮಾಡುವಂತಿಲ್ಲ ಎಂದು ಷರತ್ತು ವಿಧಿಸಲಾಗಿದ್ದು, ಷರತ್ತು ಪಾಲಿಸಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಅವರ ಪರ ವಕೀಲರು ಹೇಳಿದ್ದಾರೆ. ಜೂ.20 ರವರೆಗೆ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ. ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.