alex Certify ತೆರೆ ಮೇಲೆ ಪವರ್ ಸ್ಟಾರ್ ಪುನೀತ್ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ: ‘ಲಕ್ಕಿ ಮ್ಯಾನ್’ ರಿಲೀಸ್ ಶೀಘ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರೆ ಮೇಲೆ ಪವರ್ ಸ್ಟಾರ್ ಪುನೀತ್ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ: ‘ಲಕ್ಕಿ ಮ್ಯಾನ್’ ರಿಲೀಸ್ ಶೀಘ್ರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ‘ಲಕ್ಕಿ ಮ್ಯಾನ್’ ಶೀಘ್ರವೇ ಬಿಡುಗಡೆಯಾಗಲಿದೆ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಬಿಡುಗಡೆಗೆ ಕಾಲ ಕೂಡಿಬಂದಿದೆ. ಮಾರ್ಚ್ ನಲ್ಲಿ ಪುನೀತ್ ನಾಯಕರಾಗಿ ಅಭಿನಯಿಸಿದ್ದ ಕೊನೆಯ ಚಿತ್ರ ‘ಜೇಮ್ಸ್’ ಬಿಡುಗಡೆಯಾಗಿತ್ತು.

ಪುನಿತ್ ಅವರು ಅತಿಥಿ ಪಾತ್ರದಲ್ಲಿ ಅಭಿನಯಿಸಿರುವ ‘ಲಕ್ಕಿ ಮ್ಯಾನ್’ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ‘ಲಕ್ಕಿ ಮ್ಯಾನ್’ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪುನಿತ್ ರಾಜಕುಮಾರ್ ಮತ್ತು ಇಂಡಿಯನ್ ಮೈಕೆಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಈ ಚಿತ್ರದಲ್ಲಿ ಒಂದೇ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಚಿತ್ರ ನಿರ್ದೇಶಕಿದ್ದಾರೆ. ಮೀನಾಕ್ಷಿ ಸುಂದರಂ, ಆರ್. ಸುಂದರಂ ಚಿತ್ರ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...