
ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರ ಹೇಳಿಕೆಯನ್ನು ಟ್ರೋಲ್ ಮಾಡಿದ ‘ಬಿಗ್ ಬಾಸ್’ ವಿನ್ನರ್ ಹಾಗೂ ನಟ ಪ್ರಥಮ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಮಹಿಳೆ ಹೇಳಿಕೆ ವಿಡಿಯೋ ಟ್ರೋಲ್ ಮಾಡಿದ್ದ ಪ್ರಥಮ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, 7 ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.