alex Certify ಯುಗಾದಿ ಹೊತ್ತಲ್ಲೇ ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುಗಾದಿ ಹೊತ್ತಲ್ಲೇ ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

ಯುಗಾದಿ ಹಬ್ಬದ ಹೊತ್ತಲ್ಲೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೊಂಬಾಳೆ ಫಿಲಮ್ಸ್ ಬ್ಯಾನರ್ ನಲ್ಲಿ ಪುನೀತ್ ರಾಜಕುಮಾರ್ ಮತ್ತೊಂದು ಸಿನಿಮಾ ಸೆಟ್ಟೇರಿದೆ.

‘ಯುವರತ್ನ’ ಯಶಸ್ಸಿನ ನಂತರ ಪುನೀತ್ ‘ಜೇಮ್ಸ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಯುಗಾದಿ ಹೊತ್ತಲ್ಲೇ ಮತ್ತೊಂದು ಹೊಸ ಚಿತ್ರ ಅನೌನ್ಸ್ ಮಾಡಿದ್ದಾರೆ. ‘ಲೂಸಿಯಾ’ ಪವನ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ.

ಹೊಂಬಾಳೆ ಫಿಲಮ್ಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಲಿರುವ ಚಿತ್ರವನ್ನು ಪವನ್ ಕುಮಾರ್ ನಿರ್ದೇಶಿಸಲಿದ್ದಾರೆ. ‘ಲೂಸಿಯಾ’, ‘ಯೂಟರ್ನ್’ ಚಿತ್ರಗಳಂತಹ ವಿಭಿನ್ನ ಸಿನಿಮಾ ನೀಡಿದ್ದ ಪವನ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿ ಬರಲಿರುವ ಹೊಸ ಚಿತ್ರದ ಕುರಿತಾಗಿ ಭಾರಿ ಕುತೂಹಲ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...