alex Certify ‘ಗಂಧದ ಗುಡಿ’ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ದಲ್ಲಿ ಅಪ್ಪುಗೆ ಗಾನ ನಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗಂಧದ ಗುಡಿ’ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ದಲ್ಲಿ ಅಪ್ಪುಗೆ ಗಾನ ನಮನ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಂಪೂರ್ಣ ಸಿದ್ಧತೆ ಕೈಗೊಳ್ಳಲಾಗಿದೆ.

ಸಂಜೆ 6.30 ಕ್ಕೆ ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದ್ದು, ಶಿವರಾಜ್ ಕುಮಾರ್, ಪ್ರಭುದೇವ, ರಮ್ಯಾ ಮೊದಲಾದವರು ನೃತ್ಯ ಪ್ರದರ್ಶಿಸಲಿದ್ದಾರೆ. ಅದೇ ರೀತಿ ಗಾಯಕರದ ವಿಜಯ್ ಪ್ರಕಾಶ್, ಕುನಾಲ್ ಗಾಂಜಾ ವಾಲಾ, ಟಿಪ್ಪು, ಅರ್ಮಾನ್ ಮಲಿಕ್, ಗುರುಕಿರಣ್ ತಂಡದಿಂದ ಪುನೀತ್ ರಾಜಕುಮಾರ್ ಅವರಿಗೆ ಗಾನ ನಮನ ಸಲ್ಲಿಸಲಾಗುವುದು.

5 ಎಕರೆ ಪ್ರದೇಶದಲ್ಲಿ ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮ ಸ್ಥಳದ ಸುತ್ತಲೂ ಎಲ್ಇಡಿ ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ. ವಿಐಪಿ, ವಿವಿಐಪಿ, ಕಲಾವಿದರಿಗೆ ಗ್ರೀನ್ ರೂಮ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಭಾರಿ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಲಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...