alex Certify ಪವರ್ ಸ್ಟಾರ್ ಪುನೀತ್ ವಿಧಿವಶ: ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ವಿಧಿವಶ: ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ವಿಧಿವಶರಾದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ.

ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸದಿಂದ ಕಂಠೀರವ ಸ್ಟೇಡಿಯಂಗೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಗಿದೆ. ಕಂಠೀರವ ಸ್ಟೇಡಿಯಂನಲ್ಲಿ ಭಾರಿ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ಯಾವುದೇ ಲೋಪ ಉಂಟಾಗದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಅಭಿಮಾನಿಗಳು ಸರತಿಸಾಲಿನಲ್ಲಿ ಆಗಮಿಸಿ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...