ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ನಾಳೆ ಚಿತ್ರಮಂದಿರಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪುನೀತ್ ರಾಜಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸಲು ರಾಜ್ಯದ 250 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ನಾಳೆ 6 ಗಂಟೆಗೆ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ನಮನ ಸಲ್ಲಿಸಲಾಗುವುದು.
ಚಿತ್ರ ಪ್ರದರ್ಶಕರು ನಟ ಪುನೀತ್ ರಾಜಕುಮಾರ್ ಗೆ ನಮನ ಸಲ್ಲಿಸಲಿದ್ದಾರೆ. ಚಿತ್ರ ಸಾಹಿತಿ ನಾಗೇಂದ್ರಪ್ರಸಾದ್ ರಚಿಸಿದ ಹಾಡಿನ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕ್ಯಾಂಡಲ್ ಗಳನ್ನು ಹಚ್ಚಿ, ಮೌನಾಚರಣೆ ಮೂಲಕ ನಮನ ಸಲ್ಲಿಸಲಾಗುವುದು. ಥಿಯೇಟರ್ ಸಿಬ್ಬಂದಿ ಮತ್ತು ಅಭಿಮಾನಿಗಳು ಭಾಗಿಯಾಗಲಿದ್ದಾರೆ.