alex Certify ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಚಿತ್ರರಂಗದ ನಮನ: ಕನ್ನಡ, ತೆಲುಗು, ತಮಿಳು ಸ್ಟಾರ್ ಗಳು ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಚಿತ್ರರಂಗದ ನಮನ: ಕನ್ನಡ, ತೆಲುಗು, ತಮಿಳು ಸ್ಟಾರ್ ಗಳು ಭಾಗಿ

ಬೆಂಗಳೂರು: ಬೆಂಗಳೂರಿನಲ್ಲಿ ನಾಳೆ ‘ಪುನೀತ ನಮನ’ ಕಾರ್ಯಕ್ರಮ ನಡೆಯಲಿದೆ. ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಎರಡು ಸಾವಿರ ಜನರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಡಾ. ರಾಜಕುಮಾರ್ ಕುಟುಂಬದವರು, ಸುದೀಪ್, ಯಶ್, ಗಣೇಶ್, ಉಪೇಂದ್ರ, ರವಿಚಂದ್ರನ್, ಶ್ರೀಮುರುಳಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧೃವ ಸರ್ಜಾ ಸೇರಿದಂತೆ ಕನ್ನಡ ಚಿತ್ರರಂಗದ ಎಲ್ಲಾ ಪ್ರಮುಖ ಕಲಾವಿದರು ಭಾಗಿಯಾಗಲಿದ್ದಾರೆ.

ವಿಶಾಲ್, ರಜನಿಕಾಂತ್, ದಳಪತಿ ವಿಜಯ್, ವಿಜಯ್ ಸೇತುಪತಿ, ಚಿರಂಜೀವಿ, ಅಲ್ಲು ಅರ್ಜುನ್, ಪ್ರಭಾಸ್, ಜೂನಿಯರ್ ಎನ್.ಟಿ.ಆರ್., ರಾಮ್ ಚರಣ್, ಮೋಹನ್ ಲಾಲ್ ಸೇರಿದಂತೆ ಪ್ರಮುಖ ಕಲಾವಿದರು ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಗಣ್ಯರು ಭಾಗಿಯಾಗುವ ಸಾಧ್ಯತೆ ಇದೆ. ನಾಳೆ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಆಹ್ವಾನಿತರಿಗೆ ಪಾಸ್ ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...