alex Certify BIG BREAKING: ಪವರ್ ಸ್ಟಾರ್ ಪುನೀತ್ ಗೆ ಸ್ಯಾಂಡಲ್ ವುಡ್ ನಮನ; ನ. 16 ರಂದು ಬೃಹತ್ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪವರ್ ಸ್ಟಾರ್ ಪುನೀತ್ ಗೆ ಸ್ಯಾಂಡಲ್ ವುಡ್ ನಮನ; ನ. 16 ರಂದು ಬೃಹತ್ ಕಾರ್ಯಕ್ರಮ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ವಿಶೇಷ ನಮನ ಸಲ್ಲಿಸಲು ಸ್ಯಾಂಡಲ್ವುಡ್ ಪ್ಲಾನ್ ಮಾಡಿಕೊಂಡಿದೆ.

ಫಿಲ್ಮ್ ಚೇಂಬರ್ ನಿಂದ ನವೆಂಬರ್ 16 ರಂದು ಮಧ್ಯಾಹ್ನ 3 ಗಂಟೆಗೆ ವಿಶೇಷ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸಿನಿತಾರೆಯರು, ಗಣ್ಯರು ಭಾಗಿಯಾಗಲಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಯಾಂಡಲ್ವುಡ್ ರಾಜಕುಮಾರನಿಗೆ ನಮನ ಸಲ್ಲಿಸಲು ದೊಡ್ಡ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪುನೀತ್ ಅವರಿಗೆ ವಿಶೇಷ ನಮನ ಸಲ್ಲಿಸಲಾಗುತ್ತದೆ. ನವೆಂಬರ್ 16 ರಂದು ನಡೆಯುವ ದೊಡ್ಡ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸಿದ್ಧತೆ ಮಾಡಿಕೊಂಡಿದ್ದು, ದಕ್ಷಿಣ ಭಾರತದ ಎಲ್ಲಾ ಕಲಾವಿದರು, ಮುಖ್ಯಮಂತ್ರಿಗಳು, ಗಣ್ಯರು ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...