
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು.
ಈ ಕುರಿತಾಗಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮಾಡಿದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಪ್ಪು ಜನ್ಮದಿನವಾದ ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಅಪ್ಪು ಜನ್ಮದಿನ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ.