alex Certify BREAKING NEWS: ‘ಲವ್ ಯೂ ರಚ್ಚು’ ಫೈಟರ್ ಸಾವು ಪ್ರಕರಣ, ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಗೆ ಹಾಜರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಲವ್ ಯೂ ರಚ್ಚು’ ಫೈಟರ್ ಸಾವು ಪ್ರಕರಣ, ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಗೆ ಹಾಜರು

ರಾಮನಗರ: ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಡಿವೈಎಸ್ಪಿ ಮೋಹನ್ ಕುಮಾರ್ ಅವರ ಎದುರು ವಿಚಾರಣೆಗೆ ಹಾಜರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ನಟಿಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ

‘ಲವ್ ಯೂ ರಚ್ಚು’ ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಫೈಟರ್ ವಿವೇಕ್ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೇನ್ ಚಾಲಕ ಮಹದೇವ, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಹಾಗೂ ಸಿನಿಮಾ ನಿರ್ದೇಶಕ ಶಂಕರ್ ಅವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ

ಫೈಟರ್ ವಿವೇಕ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ನಟಿ ರಚಿತಾ ರಾಮ್ ಅವರು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಆಗಸ್ಟ್ 9 ರಂದು ರಾಮನಗರ ಸಮೀಪದ ಜೋಗನಪಾಳ್ಯ ಬಳಿ ಶೂಟಿಂಗ್ ವೇಳೆ ಕ್ರೇನ್ ವಿದ್ಯುತ್ ತಂತಿಗೆ ತಗುಲಿ ವಿವೇಕ್ ಸಾವನ್ನಪ್ಪಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...