ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ.
ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು. ರಾಗಿಣಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಅವರಿಗೆ ಜಾಮೀನು ಸಿಗದಿದ್ದರೆ ಮತ್ತೆ ಸಿಸಿಬಿ ವಿಚಾರಣೆ ಎದುರಿಸಬೇಕಿದೆ. ಪ್ರಕರಣದಲ್ಲಿ ಬಂಧಿತನಾಗಿರುವ 7ನೇ ಆರೋಪಿ ಲೂಮ್ ಪೆಪ್ಪರ್ ಸಾಂಬಾ ರಾಗಿಣಿಗೆ ಡ್ರಗ್ಸ್ ಪೂರೈಕೆ ಮಾಡಿರುವುದಾಗಿ ಹೇಳಿದ್ದಾನೆನ್ನಲಾಗಿದೆ.
ಇಂದಿಗೆ ರಾಗಿಣಿ ಸಿಸಿಬಿ ಕಸ್ಟಡಿ ಅವಧಿ ಮುಗಿಯಲಿದ್ದು ಜಾಮೀನು ಸಿಗದಿದ್ದರೆ ರಾಗಿಣಿ ಜೈಲಿಗೆ ಹೋಗಲಿದ್ದಾರೆ ಎಂದು ಹೇಳಲಾಗಿದೆ. ರಾಗಿಣಿ ಎರಡನೇ ಸಲ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇವತ್ತು ವಿಚಾರಣೆಗೆ ಬಂದರೂ ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಣೆಗೆ ಕಾಲಾವಕಾಶ ಕೋರುವುದರಿಂದ ಜಾಮೀನು ಸಿಗುವ ಸಾಧ್ಯತೆ ಇಲ್ಲವೆಂದು ಹೇಳಲಾಗಿದೆ.