ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 33ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇವತ್ತು ಹೊಸದಾಗಿ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು ನಾಳೆ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಈ ಮೊದಲು ಬೆಂಗಳೂರು ಮೂಲದ ವಕೀಲರಿಂದ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹಿಂಪಡೆದು ಹೊಸ ವಕೀಲರಿಂದ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಮುಂಬೈ ಮೂಲದ ವಕೀಲರ ಮೂಲಕ ರಾಗಿಣಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ವಿಚಾರಣೆ ಎದುರಿಸುತ್ತಿದ್ದು, ತಮ್ಮ ವಕೀಲರ ಮೂಲಕ 2 ನೇ ಬಾರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.