alex Certify ಸ್ಯಾಂಡಲ್ ವುಡ್ ಡ್ರಗ್ಸ್ ಸಂಬಂಧ ಕೇಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್, ಸ್ನೇಹಿತ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ ವುಡ್ ಡ್ರಗ್ಸ್ ಸಂಬಂಧ ಕೇಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್, ಸ್ನೇಹಿತ ವಶಕ್ಕೆ

Happy Birthday Ragini Dwivedi: A tour through her journey in cinema | The  Times of India

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಮಾದಕವಸ್ತು ಜಾಲದ ಜೊತೆ ಸಂಬಂಧ ಹೊಂದಿದ್ದ ಆರೋಪದ ಮೇಲೆ ರಾಗಿಣಿ ಸ್ನೇಹಿತ ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ರವಿಶಂಕರ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗುರುವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ರಾಗಿಣಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಡ್ರಗ್ ಪೆಡ್ಲರ್ ಜೊತೆಗೆ ಮಲಯಾಳಂ ಚಿತ್ರರಂಗದ ನಂಟು ಇರುವುದು ಗೊತ್ತಾಗಿದೆ. ಕೆಲವು ಮಲಯಾಳಂ ನಟರೊಂದಿಗೆ ಬೆಂಗಳೂರಿನ ವ್ಯಕ್ತಿ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದ್ದು, ತನಿಖೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...