alex Certify ಡ್ರಗ್ಸ್ ಕೇಸ್: ಬೆಳ್ಳಂಬೆಳಗ್ಗೆ ನಟಿ ರಾಗಿಣಿಗೆ ಬಿಗ್ ಶಾಕ್ – ನಿವಾಸದ ಮೇಲೆ ಸಿಸಿಬಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಕೇಸ್: ಬೆಳ್ಳಂಬೆಳಗ್ಗೆ ನಟಿ ರಾಗಿಣಿಗೆ ಬಿಗ್ ಶಾಕ್ – ನಿವಾಸದ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ನಟಿ ರಾಗಿಣಿಗೆ ಸಿಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದು, ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿರುವ ರಾಗಿಣಿ ಅವರ ನಿವಾಸಕ್ಕೆ ಸಿಸಿಬಿ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ರಾಗಿಣಿ ಆಪ್ತ ರವಿಶಂಕರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಗಿಣಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರೂ ಅವರು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ.

ನಿನ್ನೆ ಸಿಸಿಬಿ ವಿಚಾರಣೆಗೆ ರಾಗಿಣಿ ಹಾಜರಾಗದೇ ಸಾಕ್ಷ್ಯಗಳನ್ನು ನಾಶ ಮಾಡುವ ಬಗ್ಗೆ ಅನುಮಾನವಿದ್ದ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...