ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಖ್ಯಾತ ನಟಿ ರಾಗಿಣಿ ಅವರನ್ನು ವಿಚಾರಣೆಗೊಳಪಡಿಸಲಾಗಿದೆ.
ಈ ನಡುವೆ ರಾಗಿಣಿ 34ನೇ ಸಿಸಿಹೆಚ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಅಲ್ಲಿಸಿದ್ದಾರೆ. ರಾಗಿಣಿ ಅವರ ನಿವಾಸದ ಮೇಲೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ರಾಗಿಣಿ ಅವರ ವಿಚಾರಣೆ ಮುಂದುವರೆದಿರುವಾಗಲೇ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.