ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಮೇಲಿನ ಆರೋಪ ಸಾಬೀತಾದರೆ ಅವರ ವಿರುದ್ಧ ಕ್ರಮಕೈಗೊಳ್ಳಲು ಫಿಲಂ ಚೇಂಬರ್ ನಿರ್ಧರಿಸಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡ್ರಗ್ಸ್ ಪ್ರಕರಣದಲ್ಲಿ ನಟ, ನಟಿಯರ ಹೆಸರು ಕೇಳಿಬರುತ್ತಿರುವ ಕುರಿತಾಗಿ ಚರ್ಚೆ ನಡೆಸಲಾಗಿದೆ. ರಾಗಿಣಿ ಬಂಧಿತರಾಗಿರುವುದರಿಂದ ಅವರ ಮೇಲಿನ ಆರೋಪ ಸಾಬೀತಾದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್ ಸಭೆಯ ನಂತರ ಮಾಹಿತಿ ನೀಡಿ, ರಾಗಿಣಿ ಅವರು ವಾಣಿಜ್ಯ ಮಂಡಳಿಯ ಸದಸ್ಯತ್ವ ಪಡೆದಿಲ್ಲ. ಆದರೆ, ರಾಗಿಣಿ ಅಭಿನಯದ ಚಿತ್ರಗಳ ಮೇಲೆ ನಿರ್ಮಾಪಕರು ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ರಾಗಿಣಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.