
ಬೆಂಗಳೂರು: ಡ್ರಗ್ಸ್ ನಂಟಿನ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಇಂದಿಗೆ ಅಂತ್ಯವಾಗಲಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಇವತ್ತು ರಾಗಿಣಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಅವರಿಗೆ ಜಾಮೀನು ಸಿಗುತ್ತದೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ. ರಾತ್ರಿಯಿಡೀ ಸಾಂತ್ವನ ಕೇಂದ್ರದಲ್ಲಿ ರಾಗಿಣಿ ಆತಂಕದಲ್ಲಿದ್ದರು ಎನ್ನಲಾಗಿದೆ.
ಶನಿವಾರ ಅನಾರೋಗ್ಯದ ನೆಪವೊಡ್ಡಿ ವಿಚಾರಣೆಯಿಂದ ದೂರವುಳಿದಿದ್ದ ರಾಗಿಣಿ ಅವರ ವಿಚಾರಣೆ ಭಾನುವಾರ ನಡೆಸಲಾಗಿದೆ. ಇವತ್ತು ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಎದುರು ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.