alex Certify BREAKING NEWS: ಮಣ್ಣಲ್ಲಿ ಮಣ್ಣಾದ ಕಲಾತಪಸ್ವಿ ರಾಜೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಣ್ಣಲ್ಲಿ ಮಣ್ಣಾದ ಕಲಾತಪಸ್ವಿ ರಾಜೇಶ್

ಬೆಂಗಳೂರು: ಹಿರಿಯ ನಟ ಕಲಾ ತಪಸ್ವಿ ರಾಜೇಶ್ ಮಣ್ಣಲ್ಲಿ ಮಣ್ಣಾಗಿದ್ದಾರೆ. ಪೊಲೀಸ್ ಗೌರವದೊಂದಿಗೆ ನಟ ರಾಜೇಶ್ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಹಾಲುಮತ ಸಂಪ್ರದಾಯದಂತೆ ರಾಜೇಶ್ ಅಂತ್ಯಕ್ರಿಯೆ ನೆರವೇರಿದೆ. ಪುತ್ರರು ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗೋವಿಂದಪುರ ಗ್ರಾಮದ ಸಮೀಪದಲ್ಲಿರುವ ಸ್ನೇಹಿತ ಸಿದ್ದಲಿಂಗಯ್ಯನವರ ತೋಟದಲ್ಲಿ ಅಂತ್ಯಸಂಸ್ಕಾರ ನಡೆದಿದೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ, ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ರಾಜಕೀಯ, ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು, ಅಂತಿಮ ದರ್ಶನದ ಬಳಿಕ ಗೋವಿಂದಪುರ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...