
ಸೂಪರ್ ಸ್ಟಾರ್ ರಜನಿಕಾಂತ್ ಅವರು ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ವಿಶೇಷ ವಿಮಾನದ ಮೂಲಕ ಅವರು ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಮೂತ್ರಪಿಂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಅವರು ಕೊರೋನಾ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆಗೆ ತೆರಳಲು ಸಾಧ್ಯವಾಗಿರಲಿಲ್ಲ. ಅಮೆರಿಕದಲ್ಲಿ ಕೋರನಾ ನಿಯಂತ್ರಣವಾಗಿರುವ ಹಿನ್ನೆಲೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆ ಮುಗಿದ ನಂತರ ಅವರು ಜುಲೈ 8 ರಂದು ಭಾರತಕ್ಕೆ ವಾಪಸ್ ಬರುವ ಸಾಧ್ಯತೆ ಇದೆ.