
ಬೆಂಗಳೂರು: ವರನಟ ಡಾ. ರಾಜಕುಮಾರ್ ಅವರ 94ನೇ ಜನ್ಮದಿನವನ್ನು ಅಭಿಮಾನಿಗಳು ವಿವಿಧೆಡೆ ಸೇವಾ ಕಾರ್ಯಗಳ ಮೂಲಕ ಆಚರಿಸಿದ್ದಾರೆ.
ರಕ್ತದಾನ, ಅನ್ನದಾನ, ವೃದ್ಧಾಶ್ರಮ, ಅನಾಥಶ್ರಮಗಳಿಗೆ ನೆರವು, ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಸೇರಿದಂತೆ ಹಲವು ಸೇವಾ ಕಾರ್ಯಗಳ ಮೂಲಕ ರಾಜಕುಮಾರ್ ಹುಟ್ಟುಹಬ್ಬ ಆಚರಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿರುವ ರಾಜಕುಮಾರ್ ಸ್ಮಾರಕಕ್ಕೆ ಅಪಾರ ಸಂಖ್ಯೆಯಲ್ಲಿ ಭೇಟಿ ನೀಡಿದ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ಪಾರ್ವತಮ್ಮ ರಾಜಕುಮಾರ್ ಮತ್ತು ಪುನೀತ್ ರಾಜಕುಮಾರ್ ಸ್ಮಾರಕಗಳಿಗೆ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.