alex Certify ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ

ಬೆಂಗಳೂರು: ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವಿವಾಹ ಖಾಸಗಿ ಕಂಪನಿ ಉದ್ಯೋಗಿ ಅಕ್ಷಯ್ ಅವರೊಂದಿಗೆ ಡಿಸೆಂಬರ್ 28 ರಂದು ನಡೆಯಲಿದೆ.

ಒಂದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರಿಬ್ಬರು ಪ್ರೀತಿಸಿದ್ದು, ಇವರ ಪ್ರೀತಿಗೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿದ್ದಾರೆ. ಮದುವೆಯಲ್ಲಿ ವಧು, ವರರ ಕುಟುಂಬದವರು ಮಾತ್ರ ಹಾಜರಿರುತ್ತಾರೆ.

ಕೊರೋನಾ ಕಾರಣದಿಂದ ಕುಟುಂಬದವರು ಮಾತ್ರ ಭಾಗಿಯಾಗಲಿದ್ದಾರೆ. ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ನಡೆಯಲಿದ್ದು ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...