ರಾಜಕಾರಣ, ಸಿನಿಮಾರಂಗಕ್ಕೆ ಗುಡ್ ಬೈ ಹೇಳುವುದಾಗಿ ಮಾಜಿ ಸಂಸದೆ ರಮ್ಯಾ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಿದ ಅವರು ಈ ಬಗ್ಗೆ ಮಾತನಾಡಿದ್ದಾರೆ.
ಸಿನಿಮಾ ರಂಗದಿಂದ ಹಿಂದೆಯೇ ದೂರವಾಗಿದ್ದೇನೆ. ನನ್ನಿಂದ ಸಿನಿಮಾ ನಾವೆ ಬಹುದೂರ ಸಾಗಿದೆ. ಸಿನಿಮಾ ಮತ್ತು ರಾಜಕೀಯದಿಂದ ದೂರವಾಗಿ ಬಹಳ ಕಾಲವಾಗಿದೆ ಎಂದು ಹೇಳಿದ್ದಾರೆ.
ಸಹಜ ಜೀವನ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ರಮ್ಯಾ ‘ಅಭಿ’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟು ಏಪ್ರಿಲ್ 25 ಕ್ಕೆ 18 ವರ್ಷಗಳಾಗಿವೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಧ್ಯಾನ, ವ್ಯಾಯಾಮ, ಸಿನಿಮಾ ನೋಡುವುದು ಹೀಗೆ ದಿನ ಕಳೆಯುತ್ತಿದ್ದೇನೆ ಎಂದು ಹೇಳಿದ್ದು, ಮದುವೆ ವಿಚಾರದ ಬಗ್ಗೆ ಕುತೂಹಲದ ಹೇಳಿಕೆ ನೀಡಿದ್ದಾರೆ.