ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲೆ ಫೋಟೋಶೂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಗೊಳಿಸಲಾಗಿದೆ. ಮುಂಬೈ ಪೊಲೀಸರು ರಣವೀರ್ ಸಿಂಗ್ ಗೆ ಸಮನ್ಸ್ ನೀಡಿದ್ದಾರೆ.
ಬೆತ್ತಲೆ ಫೋಟೋ ಶೂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಆಗಸ್ಟ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಮುಂಬೈ ಪೊಲೀಸರಿಂದ ನೋಟಿಸ್ ಬಂದ ಹಿನ್ನಲೆಯಲ್ಲಿ ಅವರು ಆಗಸ್ಟ್ 22 ರಂದು ಪೊಲೀಸರ ಮುಂದೆ ಹಾಜರಾಗಲಿದ್ದಾರೆ
ಪೊಲೀಸರು ಅವರಿಗೆ ನೋಟೀಸ್ ನೀಡಲು ನಟನ ನಿವಾಸಕ್ಕೆ ತೆರಳಿದ್ದರು. ಆದರೆ, ನಟ ಮನೆಯಲ್ಲಿ ಇರಲಿಲ್ಲ. ಆಗಸ್ಟ್ 22 ರಂದು ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಪೊಲೀಸರ ಮುಂದೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ವರದಿಯಾಗಿದೆ.
ಮಾಹಿತಿ ತಂತ್ರಜ್ಞಾನ ಕಾಯಿದೆಯ ನಿಬಂಧನೆಗಳು, ಭಾರತೀಯ ದಂಡ ಸಂಹಿತೆ 292, 293 ನಂತಹ ವಿವಿಧ ಕಲಂ ಅಡಿಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.