alex Certify ಬೆತ್ತಲಾಗಿ ಫೋಟೋಗೆ ಪೋಸ್ ಕೊಟ್ಟಿದ್ದ ಖ್ಯಾತ ನಟ ರಣವೀರ್ ಸಿಂಗ್ ಗೆ ಎದುರಾಯ್ತು ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆತ್ತಲಾಗಿ ಫೋಟೋಗೆ ಪೋಸ್ ಕೊಟ್ಟಿದ್ದ ಖ್ಯಾತ ನಟ ರಣವೀರ್ ಸಿಂಗ್ ಗೆ ಎದುರಾಯ್ತು ಸಂಕಷ್ಟ

ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲೆ ಫೋಟೋಶೂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಗೊಳಿಸಲಾಗಿದೆ. ಮುಂಬೈ ಪೊಲೀಸರು ರಣವೀರ್ ಸಿಂಗ್ ಗೆ ಸಮನ್ಸ್ ನೀಡಿದ್ದಾರೆ.

ಬೆತ್ತಲೆ ಫೋಟೋ ಶೂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಆಗಸ್ಟ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಮುಂಬೈ ಪೊಲೀಸರಿಂದ ನೋಟಿಸ್ ಬಂದ ಹಿನ್ನಲೆಯಲ್ಲಿ ಅವರು ಆಗಸ್ಟ್ 22 ರಂದು ಪೊಲೀಸರ ಮುಂದೆ ಹಾಜರಾಗಲಿದ್ದಾರೆ

ಪೊಲೀಸರು ಅವರಿಗೆ ನೋಟೀಸ್ ನೀಡಲು ನಟನ ನಿವಾಸಕ್ಕೆ ತೆರಳಿದ್ದರು. ಆದರೆ, ನಟ ಮನೆಯಲ್ಲಿ ಇರಲಿಲ್ಲ. ಆಗಸ್ಟ್ 22 ರಂದು ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಪೊಲೀಸರ ಮುಂದೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ವರದಿಯಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯಿದೆಯ ನಿಬಂಧನೆಗಳು, ಭಾರತೀಯ ದಂಡ ಸಂಹಿತೆ 292, 293 ನಂತಹ ವಿವಿಧ ಕಲಂ ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...