alex Certify ಬಾಲಿವುಡ್​ ನೃತ್ಯ ಸಂಯೋಜಕ ರೆಮೋ ಡಿಸೋಜಾಗೆ ಹೃದಯಾಘಾತ: ಚೇತರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಿವುಡ್​ ನೃತ್ಯ ಸಂಯೋಜಕ ರೆಮೋ ಡಿಸೋಜಾಗೆ ಹೃದಯಾಘಾತ: ಚೇತರಿಕೆ

ನಿರ್ದೇಶಕ ಹಾಗೂ ನೃತ್ಯ ಸಂಯೋಜಕ ರೆಮೋ ಡಿಸೋಜಾಗೆ  ಹೃದಯಾಘಾತವಾಗಿದೆ. ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ರೆಮೋ ಡಿಸೋಜಾರನ್ನ ದಾಖಲಿಸಲಾಗಿದೆ. ರೆಮೋಗೆ ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬಾಲಿವುಡ್​ನ ಪ್ರಸಿದ್ಧ ನೃತ್ಯ ಸಂಯೋಜಕರಲ್ಲೊಬ್ಬರಾಗಿರುವ ರೆಮೋ ಸಾಕಷ್ಟು ರಿಯಾಲಿಟಿ ಶೋಗಳಲ್ಲಿ ಜಡ್ಜ್​ ಆಗಿ ಕಾರ್ಯ ನಿರ್ವಹಿಸಿದ್ದಾರೆ. ‘ಬಾಜಿರಾವ್​ ಮಸ್ತಾನಿ’ ಸಿನಿಮಾದ ದಿವಾನಿ ಮಸ್ತಾನಿ ಹಾಡಿನ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
‘ಸ್ಟ್ರೀಟ್​ ಡ್ಯಾನ್ಸರ್​ 3ಡಿ’, ‘ಎಬಿಸಿಡಿ’, ‘ಎಬಿಸಿಡಿ 2’ ಹಾಗೂ ‘ಫ್ಲೈಯಿಂಗ್​ ಜಾಟ್​’ ಸಿನಿಮಾಗಳನ್ನ ನಿರ್ದೇಶಿಸಿದ್ದಾರೆ . ‘ಲಾಲ್​ ಪಹರೆರ್​​ ಕಥಾ’ ಸಿನಿಮಾದ ಮೂಲಕ ಬಂಗಾಳಿ ಚಿತ್ರರಂಗದಲ್ಲೂ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...