alex Certify ಪೊಲೀಸ್ ದೂರಿನಲ್ಲಿ ‘ಶಾಕಿಂಗ್’ ಸಂಗತಿಗಳನ್ನು ಬಿಚ್ಚಿಟ್ಟ ಸುಶಾಂತ್ ಸಿಂಗ್ ತಂದೆ…! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ದೂರಿನಲ್ಲಿ ‘ಶಾಕಿಂಗ್’ ಸಂಗತಿಗಳನ್ನು ಬಿಚ್ಚಿಟ್ಟ ಸುಶಾಂತ್ ಸಿಂಗ್ ತಂದೆ…! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಮುಂಬೈ ಪೊಲೀಸರು ಇದು ಆತ್ಮಹತ್ಯೆ ಎಂದು ಹೇಳಿದ್ದಾರೆ. ಆದರೆ ಈ ತನಿಖೆ ಸುಶಾಂತ್ ಸಿಂಗ್ ಕುಟುಂಬಕ್ಕೆ ಸಮಾಧಾನ ತಂದಿಲ್ಲ. ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಅವರು, ಈಗ ಪಾಟ್ನಾದ ರಾಜೀವ್ ನಗರ ಪೊಲೀಸ್ ಠಾಣೆಯಲ್ಲಿ ಸುಶಾಂತ್ ಸಿಂಗ್ ರಜಪೂತ್ ಗೆಳತಿ ನಟಿ ರಿಯಾ ಚಕ್ರವರ್ತಿ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮುಂಬೈನಲ್ಲೇ ಕೇಸು ದಾಖಲಿಸಬೇಕೆಂದು ಸುಶಾಂತ್ ತಂದೆ ನಿರ್ಧರಿಸಿದ್ದರಾದರೂ ನಿವೃತ್ತ ಸರ್ಕಾರಿ ನೌಕರರಾಗಿರುವ ಅವರು ಅನಾರೋಗ್ಯದ ಸಮಸ್ಯೆಯಿಂದಾಗಿ ಪದೇ ಪದೇ ಓಡಾಡುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಪಾಟ್ನಾದಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿಗೆ ಸಂಬಂಧಿಸಿದಂತೆ ಈಗ ಪಾಟ್ನಾ ಪೊಲೀಸರು ತನಿಖಾ ತಂಡವನ್ನು ರಚಿಸಿದ್ದಾರೆ. ಈ ತಂಡ ಮುಂಬೈಗೆ ತೆರಳಿ ಪ್ರಕರಣದ ಸಮಗ್ರ ತನಿಖೆ ನಡೆಸಲಿದೆ.

ಪಾಟ್ನಾದ ರಾಜೀವ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ, ನಟಿ ರಿಯಾ ಚಕ್ರವರ್ತಿ ವಿರುದ್ಧ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಪುತ್ರನನ್ನು ಕೈವಶ ಮಾಡಿಕೊಂಡಿದ್ದ ರಿಯಾ ಚಕ್ರವರ್ತಿ ಮತ್ತಾಕೆಯ ಕುಟುಂಬಸ್ಥರು ಸುಶಾಂತ್ ನಮ್ಮನ್ನು ಸಂಪರ್ಕಿಸಲು ಬಿಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ತಮ್ಮ ಪುತ್ರನ ಹಣಕಾಸು ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಅವರುಗಳು ಕೋಟ್ಯಾಂತರ ರೂಪಾಯಿಗಳನ್ನು ಆತನಿಂದ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿ ರಿಯಾ ಚಕ್ರವರ್ತಿ ಬಳಿ ಇದ್ದು, ತಮ್ಮ ಪುತ್ರ ಸಾವನ್ನಪ್ಪುವ ಕೆಲ ದಿನಗಳ ಮುನ್ನ ಆತನ ಲ್ಯಾಪ್ಟಾಪ್, ವೈದ್ಯರ ಬಳಿ ಈ ಹಿಂದೆ ಚಿಕಿತ್ಸೆ ಪಡೆದಿದ್ದ ವಿವರ, ಸಾಕಷ್ಟು ಹಣ ತೆಗೆದುಕೊಂಡು ಹೋಗಿದ್ದಳು ಎಂದು ಸುಶಾಂತ್ ತಂದೆ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ. ಇದರ ಮಧ್ಯೆ ಸುಶಾಂತ್ ಮಾಜಿ ಮ್ಯಾನೇಜರ್ ದಿಶಾ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಪುತ್ರನನ್ನು ಇದರಲ್ಲಿ ಸಿಲುಕಿಸಲು ರಿಯಾ ಚಕ್ರವರ್ತಿ ಸಂಚು ರೂಪಿಸಿದ್ದಳು ಎಂದು ತಿಳಿಸಿದ್ದಾರೆ. ಈ ದೂರಿನ ಅನ್ವಯ ಈಗ ಪಾಟ್ನಾ ಪೊಲೀಸರು ಸಮಗ್ರ ತನಿಖೆ ನಡೆಸಲು ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...