alex Certify ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ರಾಬರ್ಟ್’: ಸಂತಸ ಹಂಚಿಕೊಂಡ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ರಾಬರ್ಟ್’: ಸಂತಸ ಹಂಚಿಕೊಂಡ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಗಳಿಕೆಯಲ್ಲಿಯೂ ದಾಖಲೆ ಬರೆದಿದೆ.

ಚಿತ್ರತಂಡ ಯಶಸ್ಸಿನ ಸಂಭ್ರಮದ ಹಂಚಿಕೊಳ್ಳಲು ಸಕ್ಸಸ್ ಮೀಟ್ ಕಾರ್ಯಕ್ರಮ ಆಯೋಜಿಸಿದೆ. ಈ ವೇಳೆ ಮಾತನಾಡಿದ ದರ್ಶನ್, ಸಿನಿಮಾ ಚೆನ್ನಾಗಿದ್ರೆ ನಾವೇ ಅದನ್ನು ಮೊಬೈಲ್ ಗೆ ಹಾಕಿಕೊಟ್ಟರೂ ಜನ ನೋಡಲ್ಲ. ಥಿಯೇಟರ್ ಗೆ ಹೋಗಿ ಸಿನಿಮಾ ನೋಡುತ್ತಾರೆ ಎಂದು ಹೇಳಿದ್ದಾರೆ.

ಚಿತ್ರ ಯಶಸ್ವಿಯಾಗಿರುವುದು ಸಂತಸ ತಂದಿದೆ. ಅಭಿಮಾನಿಗಳಿಂದಲೇ(ಸೆಲೆಬ್ರಿಟಿಗಳಿಂದಲೇ) ನಾವು. ಅವರನ್ನು ಎಂದಿಗೂ ಬಿಟ್ಟುಕೊಡಲ್ಲ ಎಂದು ಹೇಳಿದ್ದಾರೆ. ಬಿಡುಗಡೆಯಾದ ದಿನದಿಂದ ರಾಬರ್ಟ್ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, 75 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...