ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ದು, ನಂತರದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿ ವಿವಿಧ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.
ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದ್ದು ಆಗಸ್ಟ್ 1 ರಿಂದ ಸಿನಿಮಾ ಥಿಯೇಟರ್, ಮಲ್ಟಿಪ್ಲೆಕ್ಸ್ ಓಪನ್ ಗೆ ಅನುಮತಿ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ನಾಳೆ ಪ್ರಧಾನಿ ಮೋದಿ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದು, ನಂತರದಲ್ಲಿ ಕೇಂದ್ರದಿಂದ ಅನ್ ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಮೂರ್ನಾಲ್ಕು ತಿಂಗಳಿನಿಂದ ಕೆಲಸವಿಲ್ಲದೆ ಸಿನಿ ಕಾರ್ಮಿಕರು ಸಂಕಷ್ಟದಲ್ಲಿದ್ದು ಈಗಾಗಲೇ ಶಿವಣ್ಣ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ತೀರ್ಮಾನ ಕೈಗೊಂಡಿದ್ದಾರೆ.
ಥಿಯೇಟರ್ ಓಪನ್ ಗೆ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ಘಟಾನುಘಟಿಗಳ ಚಿತ್ರ ಬಿಡುಗಡೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಳೇ ಅನೇಕ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಬಿಡುಗಡೆಗೆ ಚಿಂತನೆ ನಡೆದಿದೆ. ಈಗಾಗಲೇ ದರ್ಶನ್ ಅಭಿಮಾನಿಗಳಿಂದ ವಿಶೇಷ ಮಾಸ್ಕ್ ಮೂಲಕ ‘ರಾಬರ್ಟ್’ ಪ್ರಚಾರ ಜೋರಾಗಿದ್ದು, ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಆಗಸ್ಟ್ 15 ರ ವೇಳೆಗೆ ‘ರಾಬರ್ಟ್’ ರಿಲೀಸ್ ಆಗಬಹುದೆಂದು ಹೇಳಲಾಗಿದೆ.
ಆರ್ಥಿಕ ಚಟುವಟಿಕೆಗೆಗೆ ಚೇತರಿಕೆ ಉದ್ದೇಶದಿಂದ ಅನ್ ಲಾಕ್ ಪ್ರಕ್ರಿಯೆ ಮುಂದುವರೆದ ಭಾಗವಾಗಿ ಆಗಸ್ಟ್ 1 ರಿಂದ ಸಿನಿಮಾ ಥಿಯೇಟರ್, ಮಲ್ಟಿಪ್ಲೆಕ್ಸ್, ಜಿಮ್, ಈಜುಕೊಳ ಮಾಲ್ ಗಳನ್ನು ತೆರೆಯುವ ಸಾಧ್ಯತೆ ಇದೆ. ಎಂದು ಹೇಳಲಾಗಿದ್ದು, ಒಂದು ವೇಳೆ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿ ಸಿನಿಮಾ ಥಿಯೇಟರ್, ಮಲ್ಟಿಪ್ಲೆಕ್ಸ್ ಓಪನ್ ಮಾಡಲು ಮಾರ್ಗಸೂಚಿ ನೀಡಿದಲ್ಲಿ ಆಗಸ್ಟ್ 15ರ ವೇಳೆಗೆ ‘ರಾಬರ್ಟ್’ ರಿಲೀಸ್ ಆಗಲಿದೆ ಎಂದು ಹೇಳಲಾಗಿದೆ.