alex Certify ‘ರಾಬರ್ಟ್’ ಭರ್ಜರಿ ಓಪನಿಂಗ್: ಮುಗಿಲುಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಬರ್ಟ್’ ಭರ್ಜರಿ ಓಪನಿಂಗ್: ಮುಗಿಲುಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ರಾಬರ್ಟ್’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಬಹುತೇಕ ಕಡೆಗಳಲ್ಲಿ ಶೋ ಆರಂಭವಾಗಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದಾರೆ.

ಥಿಯೇಟರ್ಗಳ ಬಳಿ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿ, ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು ಮೊದಲ ಶೋ ನೋಡಿ ಖುಷಿಯಾಗಿದ್ದಾರೆ. ಬಿಡುಗಡೆಯಾದ ದಿನವೇ ಮೊದಲ ಶೋ ನೋಡಿದ ಅಭಿಮಾನಿಗಳ ಸಂಭ್ರಮವಂತೂ ಮುಗಿಲುಮುಟ್ಟಿದೆ.

ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ‘ರಾಬರ್ಟ್’ ಹವಾ ಶುರುವಾಗಿದೆ. ಶಿವರಾತ್ರಿಯೊಂದಿಗೆ ‘ರಾಬರ್ಟ್’ ಜಾತ್ರೆ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವೆಡೆ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದಾರೆ. ಬೆಂಗಳೂರಿನ ಸಂತೋಷ್ ಚಿತ್ರಮಂದಿರಕ್ಕೆ ನಿರ್ದೇಶಕ ತರುಣ್ ಸುಧೀರ್, ನಟಿ ಆಶಾ ಭಟ್ ಸೇರಿದಂತೆ ಚಿತ್ರತಂಡ ಭೇಟಿ ನೀಡಿ ಸಿನಿಮಾ ವೀಕ್ಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...