ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರವನ್ನು ಮಾರ್ಚ್ 11ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುತ್ತಿದ್ದು, ಇದೇ ತಿಂಗಳು 3ನೇ ತಾರೀಖಿನಂದು ಸಂಜೆ 4.05ಕ್ಕೆ ‘ರಾಬರ್ಟ್’ ಸಿನಿಮಾದ ತೆಲುಗಿನ ಫಸ್ಟ್ ಲುಕ್ ಟೀಸರ್ ಅನ್ನು ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ನಿರ್ದೇಶಕ ತರುಣ್ ಸುಧೀರ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಆಶಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಈ ಸಿನಿಮಾವನ್ನು ತೆರೆಮೇಲೆ ನೋಡಲು ಡಿ ಬಾಸ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.