
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ ಅಂಬರೀಶ್ ಅವರಿಗೆ ಸೋಮವಾರ ಕೊರೋನಾ ಸೋಂಕು ತಗುಲಿರುವ ವರದಿ ಬಂದ ನಂತರ ರಾಕ್ ಲೈನ್ ವೆಂಕಟೇಶ್ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸೋಂಕು ತಗುಲಿರುವುದು ಧೃಢಪಟ್ಟ ಹಿನ್ನೆಲೆಯಲ್ಲಿ ರಾಕ್ ಲೈನ್ ವೆಂಕಟೇಶ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.