ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಸಾಧನೆ ಆಧರಿಸಿದ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.
ನಟಿ ಅಕ್ಷತಾ ಪಾಂಡವಪುರ ಅವರು ಸಿಂಧೂರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಕೃಷ್ಣ ಸ್ವರ್ಣಸಂದ್ರ ನಿರ್ಮಾಣ ಮಾಡಿ ನಿರ್ದೇಶಿಸಲಿದ್ದಾರೆ. ಲಾಕ್ಡೌನ್ ಮುಗಿದ ನಂತರ ಚಿತ್ರೀಕರಣ ಶುರುವಾಗಲಿದೆ ಎನ್ನಲಾಗಿದೆ.
ರೋಹಿಣಿ ಸಿಂಧೂರಿ ಹುಟ್ಟಿ ಬೆಳೆದ ಆಂಧ್ರಪ್ರದೇಶ ಮತ್ತು ಕರ್ತವ್ಯ ನಿರ್ವಹಿಸಿದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ‘ಭಾರತ ಸಿಂಧೂರಿ’ ಹೆಸರಲ್ಲಿ ಸಿನಿಮಾ ನಿರ್ಮಾಣವಾಗಲಿದ್ದು, ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸಿದ ಮಂಡ್ಯ, ಮೈಸೂರು, ಹಾಸನ, ಬೆಂಗಳೂರು ಭಾಗದಲ್ಲಿ ಚಿತ್ರೀಕರಣ ನಡೆಸಲಾಗುವುದು. ಅವರ ಸಾಧನೆಗಳನ್ನು ಪ್ರಮುಖವಾಗಿಟ್ಟುಕೊಂಡು ಸಿನಿಮಾ ನಿರ್ಮಿಸಲಾಗುವುದು ಎಂದು ಹೇಳಲಾಗಿದೆ.