alex Certify ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಗುಡ್ ನ್ಯೂಸ್: ಆರೋಗ್ಯದಲ್ಲಿ ಚೇತರಿಕೆ, ಸಂಪೂರ್ಣ ಎಚ್ಚರ – ಚಿಕಿತ್ಸೆಯಲ್ಲಿ ಸಕ್ರಿಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಗುಡ್ ನ್ಯೂಸ್: ಆರೋಗ್ಯದಲ್ಲಿ ಚೇತರಿಕೆ, ಸಂಪೂರ್ಣ ಎಚ್ಚರ – ಚಿಕಿತ್ಸೆಯಲ್ಲಿ ಸಕ್ರಿಯ

ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಪೂರ್ಣವಾಗಿ ಎಚ್ಚರ ಸ್ಥಿತಿಯಲ್ಲಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಭೌತಿಕ ಚಿಕಿತ್ಸೆಯಲ್ಲಿ ಸಕ್ರಿಯವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕೊರೋನಾ ಸೋಂಕು ತಗುಲಿದ ಕಾರಣ ಆಗಸ್ಟ್ 5 ರಿಂದ ಚೆನ್ನೈ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ 74 ವರ್ಷದ ಬಾಲಸುಬ್ರಮಣ್ಯಂ ಅವರಿಗೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಸಂಪೂರ್ಣ ಎಚ್ಚರವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಿ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಎಂಜಿಎಂ ಹೆಲ್ತ್ ಕೇರ್ ನ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕರಾದ ಡಾ. ಅನುರಾಧಾ ಭಾಸ್ಕರನ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...