alex Certify ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ಮತ್ತಷ್ಟು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ಮತ್ತಷ್ಟು ಗಂಭೀರ

ಚೆನ್ನೈ: ಅರಂಭಾಕಂನಲ್ಲಿರುವ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಆಸ್ಪತ್ರೆಯ ಮೂರನೇ ಮಹಡಿಯಿಂದ 6 ನೇ ಮಹಡಿಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ತೀವ್ರ ನಿಗಾ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದೆ. ಶ್ವಾಸಕೋಶಕ್ಕೆ ತೀವ್ರವಾದ ಹಾನಿಯಾಗಿರುವ ಎಸ್ಪಿಬಿ ಅವರಿಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಪುತ್ರ ಚರಣ್ ನಿನ್ನೆಯಷ್ಟೇ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ಕಣ್ಣು ಬಿಟ್ಟು ನೋಡಿದ ಎಸ್.ಪಿ.ಬಿ. ಆರೋಗ್ಯದಲ್ಲಿ ಮತ್ತೆ ವ್ಯತ್ಯಾಸವಾಗಿದ್ದು, ತೀವ್ರ ನಿಗಾ ಘಟಕಕ್ಕೆ ಶಿಫ್ಟ್ ಮಾಡಲಾಗಿದ್ದು, ಜೀವರಕ್ಷಕ ಸಾಧನ ಅಳವಡಿಸಲಾಗಿದೆ ಎನ್ನಲಾಗಿದೆ. ಕೊರೋನಾ ಸೋಂಕು ತಗುಲಿರುವ ಎಸ್.ಪಿ.ಬಿ. ಆಗಸ್ಟ್ 5 ರಿಂದ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...