
ಬೆಂಗಳೂರು: ಬೆಂಗಳೂರಿನ ಯಾವುದಾದರೂ ಸರ್ಕಲ್ ಮತ್ತು ರಸ್ತೆಗೆ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರು ಇಡಬೇಕೆಂದು ವಿಧಾನಪರಿಷತ್ ಸದಸ್ಯ ಗೋವಿಂದರಾಜು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಆಡು ಮುಟ್ಟದ ಸೊಪ್ಪಿಲ್ಲ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಡದ ಹಾಡುಗಳಿಲ್ಲ ಎನ್ನುವಂತೆ ಹಲವು ದಶಕಗಳ ಕಾಲ ನಮ್ಮನ್ನು ರಂಜಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಒಂದು ವೃತ್ತ ಅಥವಾ ರಸ್ತೆಗೆ ಎಸ್ಪಿಬಿ ಹೆಸರಿಡಬೇಕು ಎಂದು ಸಿಎಂಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.