alex Certify ಹಲ್ ಚಲ್ ಸೃಷ್ಟಿಸಿದ ‘ಸಲಾರ್’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ ಚಲ್ ಸೃಷ್ಟಿಸಿದ ‘ಸಲಾರ್’ ಟೀಸರ್

‘ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ಅನಿಲ್ ನಿರ್ದೇಶನದ, ಹೊಂಬಾಳೆ ಫಿಲಂಸ್ ನಿರ್ಮಾಣದ ‘ಸಲಾರ್’ ಟೀಸರ್ ಬಿಡುಗಡೆಯಾಗಿದ್ದು, ಹಲ್ ಚಲ್ ಸೃಷ್ಟಿಸಿದೆ.

ಬೆಳಗ್ಗೆ 5.12 ಕ್ಕೆ ‘ಸಲಾರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, 3.8 ಕೋಟಿಗೂ ಅಧಿಕ ಮಂದಿ ವೀಕ್ಷಿಸಿದ್ದು, ನಂಬರ್ ಒನ್ ಟ್ರೆಂಡಿಂಗ್ ನಲ್ಲಿದೆ. 66 ಸಾವಿರಕ್ಕೂ ಅಧಿಕ ಮಂದಿ ಕಾಮೆಂಟ್ಸ್ ಮಾಡಿದ್ದು, 13 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

‘ಕೆಜಿಎಫ್’ ಚಾಪ್ಟರ್ 1, ಮತ್ತು ಚಾಪ್ಟರ್ 2 ಭರ್ಜರಿ ಗೆಲುವಿನ ನಂತರ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಭಾರಿ ನಿರೀಕ್ಷೆ ಮೂಡಿಸಿದೆ. ‘ಬಾಹುಬಲಿ’ ಬಳಿಕ ‘ಸಾಹೋ’ ‘ರಾಧೇಶ್ಯಾಮ್’, ‘ಆದಿಪುರುಷ’ ಚಿತ್ರಗಳು ನಿರೀಕ್ಷಿತ ಯಶಸ್ಸು ಕಾಣದೇ ಪ್ರಭಾಸ್ ‘ಸಲಾರ್’ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಶ್ರುತಿ ಹಾಸನ್, ಈಶ್ವರಿ ರಾವ್, ಜಗಪತಿ ಬಾಬು, ಶ್ರೀಯಾ ರೆಡ್ಡಿ, ಗರುಡ ರಾಮ್, ಪೃಥ್ವಿರಾಜ್ ಸುಕುಮಾರನ್ ಮೊದಲಾದವರು ‘ಸಲಾರ್’ನಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...