alex Certify ಬೆದರಿಕೆ ಬೆನ್ನಲ್ಲೇ ಶಸ್ತ್ರಾಸ್ತ್ರ ಪರವಾನಿಗೆ ಅನುಮತಿ ಕೋರಿದ ಸೂಪರ್ ಸ್ಟಾರ್ ಸಲ್ಮಾನ್ ಖಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆದರಿಕೆ ಬೆನ್ನಲ್ಲೇ ಶಸ್ತ್ರಾಸ್ತ್ರ ಪರವಾನಿಗೆ ಅನುಮತಿ ಕೋರಿದ ಸೂಪರ್ ಸ್ಟಾರ್ ಸಲ್ಮಾನ್ ಖಾನ್

ಮುಂಬೈ: ನಟ ಸಲ್ಮಾನ್ ಖಾನ್ ಇಂದು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಪನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದಾರೆ.

ದಕ್ಷಿಣ ಮುಂಬೈನಲ್ಲಿ ಕ್ರಾಫರ್ಡ್ ಮಾರ್ಕೆಟ್ ಎದುರು ಇರುವ ಮುಂಬೈ ಪೊಲೀಸ್ ಪ್ರಧಾನ ಕಛೇರಿಗೆ ಸಂಜೆ 4 ಗಂಟೆ ಸುಮಾರಿಗೆ ತಮ್ಮ ಕಾರಿನಲ್ಲಿ ಆಗಮಿಸಿದ ಸಲ್ಮಾನ್ ಖಾನ್ ಕಚೇರಿಯಲ್ಲಿ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿ ತಮಗೆ ಹಾಗೂ ತಮ್ಮ ತಂದೆಗೆ ಬಂದ ಬೆದರಿಕೆ ಕುರಿತಾಗಿ ಸಮಾಲೋಚನೆ ನಡೆಸಿದ್ದಾರೆ.

ಇತ್ತೀಚೆಗೆ ಬೆದರಿಕೆ ಪತ್ರ ಸ್ವೀಕರಿಸಿದ ನಂತರ, 56 ವರ್ಷದ ನಟ ತನ್ನ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿಯನ್ನು ಪಡೆಯಲು ಮುಂಬೈ ಪೊಲೀಸರಿಗೆ ಲಿಖಿತ ಅರ್ಜಿಯನ್ನು ಸಲ್ಲಿಸಿದ್ದಾರೆ. ಪರವಾನಗಿ ವಿಚಾರದಲ್ಲಿ ಸಲ್ಮಾನ್ ಮುಂಬೈ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿದ್ದಾರೆ.

ಜೂನ್‌ನಲ್ಲಿ, ಸಲ್ಮಾನ್ ಖಾನ್ ಮತ್ತು ಅವರ ತಂದೆ, ಹಿರಿಯ ಬರಹಗಾರ-ನಿರ್ಮಾಪಕ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು. ಅಪರಿಚಿತ ವ್ಯಕ್ತಿಯ ವಿರುದ್ಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...