
ಖ್ಯಾತ ನಟ ನಾಗಚೈತನ್ಯ ಮತ್ತು ನಟಿ ಸಮಂತಾ ಅಕ್ಕಿನೇನಿ ಅವರ ನಡುವೆ ಎಲ್ಲವೂ ಸರಿಯಿಲ್ಲ. ಸ್ಟಾರ್ ನಟ, ನಟಿಯ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರನ್ನು ಒಂದುಗೂಡಿಸಲು ಮಾಡಿದ ಪ್ರಯತ್ನಗಳು ವಿಫಲವಾಗಿದ್ದು, ಅಕ್ಟೋಬರ್ 7 ರಂದು ತಮ್ಮ ವಿಚ್ಛೇದನದ ಕುರಿತಾದ ಮಾಹಿತಿಯನ್ನು ಸಮಂತಾ ಮತ್ತು ನಾಗಚೈತನ್ಯ ಬಹಿರಂಗಪಡಿಸಲಿದ್ದಾರೆ ಎಂದು ಹೇಳಲಾಗಿದೆ.
ತಮ್ಮ ದಾಂಪತ್ಯ ಕಲಹ ಮತ್ತು ಡೈವೋರ್ಸ್ ಕುರಿತಾಗಿ ಯಾವುದೇ ಪ್ರತಿಕ್ರಿಯೆ ನೀಡದ ಸ್ಟಾರ್ ದಂಪತಿ ಸಾಮಾಜಿಕ ಜಾಲತಾಣದಲ್ಲಿಯೇ ಬೇರೆಯಾಗುವ ನಿರ್ಧಾರ ಪ್ರಕಟಿಸಲಿದ್ದಾರೆ. ಅಂದ ಹಾಗೆ, ಅಕ್ಟೋಬರ್ 7 ಅವರ ಮದುವೆ ವಾರ್ಷಿಕೋತ್ಸವವಾಗಿದ್ದು, 4ನೇ ವಿವಾಹ ವಾರ್ಷಿಕೋತ್ಸವದಂದೇ ಡೈವೋರ್ಸ್ ಬಗ್ಗೆ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.