alex Certify BIG BREAKING: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಜೀವನ್ಮರಣ ಹೋರಾಟ ಆಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಜೀವನ್ಮರಣ ಹೋರಾಟ ಆಂತ್ಯ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್(38) ನಿಧನರಾಗಿದ್ದಾರೆ. ಇಂದು ಬೆಳಗ್ಗೆ 3.34 ಕ್ಕೆ ವಿಜಯ್ ಜೀವನ್ಮರಣ ಹೋರಾಟ ಅಂತ್ಯವಾಗಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯ ವೈದ್ಯರಿಂದ ಅಧಿಕೃತ ಘೋಷಣೆ ಮಾಡಲಾಗಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನದ ನಂತರ ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು. ವಿಜಯ್ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...