
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಆಹ್ವಾನ ನೀಡಲಾಗಿದೆ.
ಜನವರಿ 22ರಂದು ಅಯೋಧ್ಯ ಶ್ರೀ ರಾಮಮಂದಿರ ರಾಮ್ ಲೀಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ದೇಶ ವಿದೇಶಗಳ ಗಣ್ಯರು, ಸಂತರು, ಸ್ವಾಮೀಜಿಗಳು ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಯಶ್ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.