alex Certify BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ‘ಕೋಟಿ ರಾಮು’ ಮೃತಪಟ್ಟ ಬೆನ್ನಲ್ಲೇ ಮತ್ತೊಬ್ಬ ನಿರ್ಮಾಪಕ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ‘ಕೋಟಿ ರಾಮು’ ಮೃತಪಟ್ಟ ಬೆನ್ನಲ್ಲೇ ಮತ್ತೊಬ್ಬ ನಿರ್ಮಾಪಕ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ನಿರ್ಮಾಪಕ ಚಂದ್ರಶೇಖರ್ ಶ್ವಾಸಕೋಶ ತೊಂದರೆಯಿಂದ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಕೋಟಿ ನಿರ್ಮಾಪಕ ರಾಮು ಮೃತಪಟ್ಟಿದ್ದರು. ಇಂದು ನಿರ್ಮಾಪಕ ಚಂದ್ರಶೇಖರ್ ಮೃತಪಟ್ಟಿದ್ದಾರೆ. ‘ಅಣ್ಣಯ್ಯ’, ‘ಬಿಂದಾಸ್’, ‘ರನ್ನ’ ಮೊದಲಾದ ಸಿನಿಮಾಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಅವರಿಗೆ 23 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದಿತ್ತು. ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಗುಣಮುಖರಾಗಿ ಮನೆಗೆ ಮರಳಿದ್ದ ಅವರಿಗೆ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಮೃತಪಟ್ಟಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...