alex Certify BIG BREAKING: ನಟಿ ಮೊಬೈಲ್ ಸಿಸಿಬಿ ವಶಕ್ಕೆ, ವಿಚಾರಣೆ ಬಳಿಕ ಸಂಜನಾ ಬಂಧನ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಟಿ ಮೊಬೈಲ್ ಸಿಸಿಬಿ ವಶಕ್ಕೆ, ವಿಚಾರಣೆ ಬಳಿಕ ಸಂಜನಾ ಬಂಧನ ಸಾಧ್ಯತೆ

ಬೆಂಗಳೂರು: ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಇವತ್ತು ಬೆಳ್ಳಂಬೆಳಗ್ಗೆ ಇಂದಿರಾನಗರದಲ್ಲಿರುವ ನಟಿ ಸಂಜನಾ ಗರ್ಲಾನಿ ನಿವಾಸದ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಸಿಸಿಬಿ ಕಚೇರಿಗೆ ಕರೆತರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ಸ್ ಪೆಕ್ಟರ್ ಪುನೀತ್ ಮತ್ತು ಅಂಜುಮಾಲಾ ಅವರ ತಂಡದಿಂದ ಸಂಜನಾ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ಇವತ್ತು ಬೆಳಗ್ಗೆ ದಾಳಿ ಮಾಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ನಿನ್ನೆ ರಾತ್ರಿಯಿಂದಲೇ ಸಿಸಿಬಿ ಕಚೇರಿಯಲ್ಲಿ ಉಳಿದುಕೊಂಡಿದ್ದ ಅಧಿಕಾರಿಗಳು ದಾಳಿಗೂ ಮುನ್ನ ಪೂರ್ವ ತಯಾರಿ ಮಾಡಿಕೊಂಡಿದ್ದರು. ಬೆಳ್ಳಂಬೆಳಿಗ್ಗೆ ದಾಳಿ ಸಂಜನಾ ಮನೆ ಮೇಲೆ ದಾಳಿ ನಡೆಸಿದ್ದು ಹೆಚ್ಚಿನ ವಿಚಾರಣೆಗಾಗಿ ಅವರನ್ನು ಸಿಸಿಬಿ ಕಚೇರಿಗೆ ಕರೆದೊಯ್ಯುವ ಸಾಧ್ಯತೆ ಇದೆ.

ಪ್ರೋಗ್ರಾಮ್ ಮ್ಯಾನೇಜ್ ಮೆಂಟ್ ಮಾಡುತ್ತಿದ್ದ ಪೃಥ್ವಿ ಶೆಟ್ಟಿ 2 ದಿನ ವಿಚಾರಣೆಯಲ್ಲಿ ನೀಡಿದ ಮಾಹಿತಿ ಆಧರಿಸಿ ಸಂಜನಾ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...