ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕಾಗಿ ‘ಜೇಮ್ಸ್’ ಎತ್ತಂಗಡಿ ಮಾಡಲಾಗ್ತಿದೆ ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ಸಿನಿಮಾ ಮಂದಿರಗಳಿಂದ ‘ಜೇಮ್ಸ್’ ಚಿತ್ರವನ್ನು ಎತ್ತಂಗಡಿ ಮಾಡಲು ಪ್ರಯತ್ನ ನಡೆಸಲಾಗಿದೆ. ‘ಜೇಮ್ಸ್’ ನಿರ್ಮಾಪಕರು ನನ್ನನ್ನು ಭೇಟಿ ಮಾಡಿದ್ದರು. ‘ಜೇಮ್ಸ್’ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ಬಿಜೆಪಿ ಶಾಸಕರು ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕಾಗಿ ‘ಜೇಮ್ಸ್’ ಪ್ರದರ್ಶನ ರದ್ದು ಮಾಡಬೇಕೆಂದು ಬಿಜೆಪಿ ಶಾಸಕರು ಒತ್ತಡ ಹಾಕಿದ್ದಾರೆ ಎಂದು ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿಯವರು ‘ಜೇಮ್ಸ್’ ನಿಲ್ಲಿಸುವುದು ದೌರ್ಜನ್ಯ. ಪುನೀತ್ ಅಭಿಮಾನಿಗಳು ಸಿನಿಮಾ ನೋಡುತ್ತಿದ್ದಾರೆ. ಯಾರಿಗೆ ಇಷ್ಟ ಇದೆಯೋ ಅವರು ಸಿನಿಮಾ ನೋಡಲಿ. ದೌರ್ಜನ್ಯ ಬೇಡ, ಅಪ್ಪು ‘ಜೇಮ್ಸ್’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಬೇಕೆಂದು ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.