
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಶಂಕರೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕರೇಗೌಡರ ಮನೆ ಮತ್ತು ಕಚೇರಿ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಪರಿಶೀಲನೆ ವೇಳೆ ದೊರೆತ ಮಾಹಿತಿ, ದಾಖಲೆ ಆಧರಿಸಿ ಮತ್ತಷ್ಟು ಮಾಹಿತಿ ಕಲೆ ಹಾಕಿದ ಪೊಲೀಸರು ರಾತ್ರಿ ಅವರನ್ನು ಬಂಧಿಸಿದ್ದಾರೆ. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.