![Masala on Sharmiela Mandre](https://s3.ap-southeast-1.amazonaws.com/images.deccanchronicle.com/dc-Cover-ha2gcbo444uj9lort1prqcno36-20181016233036.Medi.jpeg)
ಸ್ಯಾಂಡಲ್ ವುಡ್ ನಟಿ ಶರ್ಮಿಳಾ ಮಾಂಡ್ರೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶರ್ಮಿಳಾ ಮಾಂಡ್ರೆ ನನಗೆ ಮತ್ತು ನನ್ನ ಕುಟುಂಬದ ಕೆಲವು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ರೋಗಲಕ್ಷಣವಿಲ್ಲದ ಕಾರಣ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್ ನಲ್ಲಿ ಇರುವ ಅವರು ಚಿಕಿತ್ಸೆ ಪಡೆಯುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.