ಮುಂಬೈ: ಬ್ಲ್ಯೂಫಿಲ್ಮ್ ದಂಧೆಯಲ್ಲಿ ತೊಡಗಿದ್ದ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಅಪರಾಧ ವಿಭಾಗದ ಪೊಲೀಸರಿಂದ ಬಂಧನವಾಗಿದ್ದು, ಆಪ್ ಗಳ ಮೂಲಕ ಬ್ಲೂಫಿಲಂ ದಂಧೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಹಿತಿ ಆಧರಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿದ ರಾಜ್ ಕುಂದ್ರಾನನ್ನು ಬಂಧಿಸಿದ್ದಾರೆ.
ರಾಜ್ ಕುಂದ್ರಾ ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರರಾಗಿದ್ದಾರೆ. ಈ ಬಗ್ಗೆ ನಮಗೆ ಸಾಕಷ್ಟು ಪುರಾವೆಗಳಿವೆ. ತನಿಖೆ ಪ್ರಗತಿಯಲ್ಲಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗರೇಲ್ ಹೇಳಿದ್ದಾರೆ.