alex Certify ಕೊರೊನಾ ಲಸಿಕೆ ಹಾಕಿಸಿಕೊಂಡ ಭಾರತದ ಮೊದಲ ನಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ಹಾಕಿಸಿಕೊಂಡ ಭಾರತದ ಮೊದಲ ನಟಿ

ಕೊರೊನಾ ವಿರುದ್ಧ ಲಸಿಕೆ ಅಭಿಯಾನ ಶುರುವಾಗಿದೆ.ಅನೇಕ ದೇಶಗಳಲ್ಲಿ ಈಗಾಗಲೇ ಕೊರೊನಾ ಲಸಿಕೆ ಹಾಕುವ ಕಾರ್ಯ ಶುರುವಾಗಿದೆ. ಭಾರತದಲ್ಲಿ ಕೊರೊನಾ ಲಸಿಕೆ ಡ್ರೈ ರನ್ ನಡೆಯುತ್ತಿದೆ. ಗೋಪಿ ಕಿಶನ್, ಆಂಖೆ, ಬೆವಾಫಾ ಸನಮ್ ಮುಂತಾದ ಹಿಟ್ ಚಿತ್ರಗಳಲ್ಲಿ ನಟಿಸಿರುವ ನಟಿ ಶಿಲ್ಪಾ ಶಿರೋಡ್ಕರ್ ಕೊರೊನಾ ಲಸಿಕೆ ಹಾಕಿಸಿಕೊಂಡ ಮೊದಲ ಬಾಲಿವುಡ್ ನಟಿಯಾಗಿದ್ದಾರೆ.

ಶಿಲ್ಪಾ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿದ್ದಾರೆ. ವ್ಯಾಕ್ಸಿನೇಷನ್ ನಂತರ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವ ಶಿಲ್ಪಾ ತೋಳಿನ ಮೇಲೆ ಸಣ್ಣ ಬ್ಯಾಂಡೇಜ್ ಇದೆ. ಸಾಮಾಜಿಕ ಜಾಲತಾಣದಲ್ಲಿ ಶಿಲ್ಪಾ ಪೋಸ್ಟರ್ ವೈರಲ್ ಆಗಿದೆ.

ಶಿಲ್ಪಾ ಬಿಟ್ಟರೆ ಬೇರೆ ಯಾವ ಭಾರತೀಯ ನಟಿಯರೂ ಲಸಿಕೆ ಹಾಕಿಸಿಕೊಂಡಿಲ್ಲ. ಶಿಲ್ಪಾ ದುಬೈನಲ್ಲಿ ಲಸಿಕೆ ಹಾಕಿಸಿಕೊಂಡಿದ್ದಾರೆ. 2000ರಲ್ಲಿ ಮದುವೆಯಾದ ಶಿಲ್ಪಾ ಕೆಲ ವರ್ಷಗಳ ಕಾಲ ಭಾರತದಲ್ಲಿದ್ದರು. ಈಗ ಪತಿ ಜೊತೆ ದುಬೈನಲ್ಲಿ ವಾಸವಾಗಿದ್ದಾರೆ.ಶಿ ಲ್ಪಾ ಶೀಘ್ರವೇ ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಅವ್ರು ಚಿತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

https://www.instagram.com/p/CJtLSdllGyW/?utm_source=ig_embed

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...