alex Certify ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ ಕೇಳಿ ಬಂದಿದೆ. ನಟಿ ವಿರುದ್ಧ ಕೋರ್ಟ್ ನಲ್ಲಿ ನಟ ಶರವಣನ್ ಖಾಸಗಿ ದೂರು ದಾಖಲಿಸಿದ್ದರು. ನಟಿ ಉಷಾ ವಿರುದ್ದ ದೂರು ದಾಖಲಿಸಿದ್ದು, ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.

ಅವರನ್ನು ಬಂಧಿಸಿರುವ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ನಟಿ ಉಷಾ ರವಿಶಂಕರ್ ಗೆ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ನಂತರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು ಎನ್ನಲಾಗಿದೆ.

‘ಒಂದಲ್ಲ ಎರಡು’, ‘ಸಲಗ’ ಚಿತ್ರಗಳು ಸೇರಿ ದಂತೆ ಹಲವು ಸಿನಿಮಾ, ಧಾರಾವಾಹಿಗಳಲ್ಲಿ ಉಷಾ ರವಿಶಂಕರ್ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...